Breaking News

ಸೂಪರ್ ಮಾರ್ಕೆಟ್ ಗೆ ನುಗ್ಗಿದ ಕಳ್ಳರು – ಕ್ಯಾಶಿಯರ್ ನ್ನು ಬೆದರಿಸಿ ದರೋಡೆ!

ಬೆಂಗಳೂರು ನಗರದ ಬನ್ನೇರಘಟ್ಟ ರಸ್ತೆಯ ಅರಕೆರೆಯಲ್ಲಿರುವ ಸೂಪರ್ ಮಾರ್ಕೆಟ್‌ನಲ್ಲಿ ನಿನ್ನೆ ರಾತ್ರಿ ಭೀಕರ ದರೋಡೆ ನಡೆದಿದೆ. ಗ್ರಾಹಕರಂತೆ ಅಂಗಡಿಗೆ ನುಗ್ಗಿದ ಮೂವರು ದುಷ್ಕರ್ಮಿಗಳು ಮೊದಲು ಕಳ್ಳತನಕ್ಕೆ ಯತ್ನಿಸಿದ್ದು, ಪ್ರಶ್ನಿಸಿದ ಕ್ಯಾಶಿಯರ್‌ಗೆ ಮಾರಕಾಸ್ತ್ರಗಳಿಂದ ಬೆದರಿಕೆ ಹಾಕಿ ಕ್ಯಾಶ್ ಬಾಕ್ಸ್‌ನಲ್ಲಿದ್ದ ಹಣವನ್ನು ದೋಚಿದ್ದಾರೆ. ಕಳ್ಳರನ್ನು ತಡೆಯಲು ಬಂದ ಸಿಬ್ಬಂದಿಯ ಮೇಲೂ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಗಲಾಟೆಯ ಸದ್ದು ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸುತ್ತಿದ್ದಂತೆ ದರೋಡೆಕೋರರು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಸಾರ್ವಜನಿಕರು ಒಬ್ಬ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಉಳಿದ ಇಬ್ಬರು ಹಣದೊಂದಿಗೆ ಪರಾರಿಯಾಗಿದ್ದಾರೆ. ಘಟನೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅವುಗಳ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆಯಿಂದ ಸ್ಥಳೀಯ ವ್ಯಾಪಾರಿಗಳಲ್ಲಿ ಆತಂಕ ಉಂಟಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *