Breaking News

ಹುಲಿಕಲ್ ಘಾಟಿಯಲ್ಲಿ ಬೆಂಕಿ ಅವಘಡ: ಖಾಸಗಿ ಬಸ್ ಸಂಪೂರ್ಣ ಭಸ್ಮ

ಶಿವಮೊಗ್ಗ-ಉಡುಪಿ ಗಡಿಯ ಹುಲಿಕಲ್ (ಬಾಳೆಬರೇ) ಘಾಟಿಯಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ಕಾಣಿಸಿಕೊಂಡ ಘಟನೆ ಶನಿವಾರ ನಡೆದಿದೆ. ಆದೃಷ್ಟವಶಾತ್, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಸುರಕ್ಷಿತವಾಗಿ ಹೊರಬಂದಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮೊದಲು ಬಸ್‌ನಿಂದ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ವ್ಯಾಪಿಸಿದೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ದೊರೆಯುವ ಸಾಧ್ಯತೆ ಇದೆ. ಘಟನೆಯಿಂದ ಕೆಲಕಾಲ ರಸ್ತೆ ಸಂಚಾರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *