ಹಿರಿಯೂರಿನ ಭಾಗ್ಯಲಕ್ಷ್ಮಿ ಜ್ಯುವೆಲರ್ಸ್ ಅಂಡ್ ಬ್ಯಾಂಕರ್ಸ್ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿ ₹5.76 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಪ್ರವೀಣ್ ಕುಮಾರ್ ಸಿ.ಆರ್ (33) ಎಂದು ಗುರುತಿಸಲಾಗಿದ್ದು, ಕಳವು ಮಾಡಿದ ಆಭರಣಗಳನ್ನು ಚಳ್ಳಕೆರೆಯ ಜ್ಯುವೆಲರ್ಸ್ ಅಂಗಡಿಗೆ ಮಾರಾಟ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಆತನ ಮಾಹಿತಿಯ ಮೇರೆಗೆ ಪೊಲೀಸರು ಕಳುವಾದ ಮಾಲನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಭೇದಿಸಿದ ಹಿರಿಯೂರು ನಗರ ಠಾಣೆ ಪೊಲೀಸರ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

