ಬೈಲಹೊಂಗಲ: ತಾಲೂಕಿನ ಆನಿಗೊಳ ಗ್ರಾಮದ ಬಸ್ ನಿಲ್ದಾಣ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಟ್ಕಾ ಜೂಜಾಟ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪಿಐ ಪ್ರಮೋದ ಯಲಿಗಾರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತನನ್ನು ಗ್ರಾಮದ ರಾಮಲಿಂಗ ಮಡಿವಾಳಪ್ಪ ಮಾಡಮಗೇರಿ (59) ಎಂದು ಗುರುತಿಸಲಾಗಿದೆ. ಆರೋಪಿ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ಓಸಿ ಅಂಕಿ-ಸಂಖ್ಯೆಗಳನ್ನು ಬರೆಯಿಸಿಕೊಂಡು, ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಬಾಂಬೆ-ಕಲ್ಯಾಣ ಮಟಕಾ ಅಂಕಿ-ಸಂಖ್ಯೆಗಳ ಆಧಾರದಲ್ಲಿ ಜೂಜಾಟ ನಡೆಯುತ್ತಿದ್ದ ವೇಳೆ ದಾಳಿ ನಡೆಸಲಾಗಿದ್ದು, ಆರೋಪಿಯನ್ನು ಸ್ಥಳದಲ್ಲೇ ವಶಕ್ಕೆ ಪಡೆಯಲಾಗಿದೆ. ಈ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

