ಸುಮ್ಮನೆ ಗಾಡಿ ಹಿಡಿದು ಜನರಿಗೆ ಕಿರುಕುಳ ಬೇಡ..! ಈಗಲಾದರೂ ದಂಡದ ಬದಲು ಟ್ರಾಫಿಕ್ ಕ್ಲಿಯರ್ ಮಾಡುವುದನ್ನು ಕಲಿತಾರಾ ಟ್ರಾಫಿಕ್ ಪೊಲೀಸರು..?
ಬೆಂಗಳೂರು: ರಾಜ್ಯದ ನೂತನ ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ, Priyank Kharge ರಾಜ್ಯ ಪೊಲೀಸ್ ಪ್ರಧಾನ ಕಚೇರಿಗೆ ಭೇಟಿ ನೀಡಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು..
ಸಭೆಯಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ, ಸೈಬರ್ ಕ್ರೈಂ ಹಾಗೂ ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು…
ಸಭೆ ಆರಂಭಕ್ಕೂ ಮುನ್ನ, Dr. M. A. Saleem ಗೃಹ ಸಚಿವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು. ಬಳಿಕ ವಿವಿಧ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಗೃಹ ಸಚಿವರು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಅಪರಾಧ ಚಟುವಟಿಕೆಗಳು, ಮಹಿಳೆಯರ ಮೇಲಿನ ದೌರ್ಜನ್ಯ, ಸೈಬರ್ ಅಪರಾಧ ಪ್ರಕರಣಗಳ ಕುರಿತು ಮಾಹಿತಿ ಪಡೆದುಕೊಂಡರು…
ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚುತ್ತಿರುವ ದ್ವೇಷ ಭಾಷಣ, ಸುಳ್ಳು ಸುದ್ದಿಗಳು ಹಾಗೂ ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು…
ಇದೇ ವೇಳೆ, ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ಬಗ್ಗೆ ಗಂಭೀರ ಚರ್ಚೆ ನಡೆದಿದ್ದು, ಸಾರ್ವಜನಿಕರಿಗೆ ತೊಂದರೆ ಆಗದಂತೆ ಸಂಚಾರ ವ್ಯವಸ್ಥೆ ಸುಧಾರಣೆ, ಪ್ರಮುಖ ಜಂಕ್ಷನ್‌ಗಳಲ್ಲಿ ಕಟ್ಟುನಿಟ್ಟಿನ ನಿಯಂತ್ರಣ, ಹಾಗೂ ಟ್ರಾಫಿಕ್ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ..
ಹೊರ ರಾಜ್ಯದ ಯುವತಿಯರು ಹಾಗೂ ಮಹಿಳೆಯರಿಗೆ ಕಿರುಕುಳ, ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಇನ್ನಷ್ಟು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಗೃಹ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು…
ಈ ವೇಳೆ ಸೇರಿದಂತೆ ಸೀಮಂತ್ ಕುಮಾರ್ ಸಿಂಗ್, ನಗರ ಪೊಲೀಸ್ ಮತ್ತು ಸಿಐಡಿ ವಿಭಾಗದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

