ಗಂಗಾವತಿ: ಆನ್‌ಲೈನ್ ಗೇಮ್ ಚಟದಿಂದ ಮನೆಯಲ್ಲಿ ನಡೆದ ಮಾತಿನ ಚಕಮಕಿ ದುರಂತಕ್ಕೆ ತಿರುಗಿ, ಯುವಕನೊಬ್ಬ ತನ್ನ ತಂದೆ ಹಾಗೂ ಅಕ್ಕನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೊಸ ಅಯೋಧ್ಯೆ ಗ್ರಾಮದಲ್ಲಿ ನಡೆದಿದೆ. ವೆಂಕಟನಾಯ್ಡು (45) ಮತ್ತು ಪ್ರಗತಿ (19) ಮೃತಪಟ್ಟಿದ್ದು, ತಾಯಿ ಸೌಜನ್ಯ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಬೈಲ್‌ನಲ್ಲಿ ಗೇಮ್ ಆಡದಂತೆ ಬುದ್ಧಿಮಾತು ಹೇಳಿದ್ದಕ್ಕೆ ಸಾಯಿ ವೆಂಕಟಮಣಿ (18) ಆಕ್ರೋಶಗೊಂಡು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆಯ ಬಳಿಕ ಆರೋಪಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು, ಗಾಯಗೊಂಡ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

