Breaking News

ಮದುವೆ ಆಗೋದಾಗಿ ನಂಬಿಸಿ ಯುವಕನಿಗೆ 35 ಲಕ್ಷ ರೂ ವಂಚಿಸಿದ ಯುವತಿ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೋರ್ವಳು ಯುವಕನಿಂದ 35 ಲಕ್ಷ ರೂ. ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಅನಿಲ್ ಎಂಬ ಯುವಕ ನೀಡಿದ ದೂರಿನ ಮೇರೆಗೆ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯವಾದ ಲಕ್ಷ್ಮೀ ಎಂಬ ಯುವತಿ, ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ ಎಂದು ನಂಬಿಸಿ ಅನಿಲ್‌ನಿಂದ ಹಂತ ಹಂತವಾಗಿ 35 ಲಕ್ಷ ರೂ. ಹೂಡಿಕೆ ಮಾಡಿಸಿದ್ದಾಳೆ ಎನ್ನಲಾಗಿದೆ. ನಂತರ ಹಣ ಹಿಂಪಡೆಯಲು ಯತ್ನಿಸಿದಾಗ ಖಾತೆ ಡಿಲೀಟ್ ಆಗಿರುವುದು ಹಾಗೂ ಯುವತಿಯ ಸಂಪರ್ಕ ಕಡಿತಗೊಂಡಿರುವುದು ಗೊತ್ತಾಗಿದೆ. ತಾನು ಮೋಸಕ್ಕೊಳಗಾಗಿರುವುದನ್ನು ಅರಿತ ಅನಿಲ್ ಸೈಬರ್ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ಮುಂದುವರಿದಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *