ಕರ್ನಾಟಕದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರೆಂಬ ಆರೋಪದ ಮೇಲೆ ಇಬ್ಬರು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆಯ ಜಮೀರ್ ಖಾನ್ ಮತ್ತು ತುಮಕೂರಿನ ಅಲ್ಲಾಭಕ್ಷಿ ಬಂಧಿತರು. ಸಾಮಾಜಿಕ ಜಾಲತಾಣಗಳ ಮೂಲಕ ವಿದೇಶದಲ್ಲಿದ್ದ ಉಗ್ರ ಸಂಪರ್ಕಗಳಿಗೆ ಇವರು ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಇಬ್ಬರೂ ಪಾಕಿಸ್ತಾನ ಮೂಲದ ಶಂಕಿತ ಹ್ಯಾಂಡ್ಲರ್‌ಗಳ ಸಂಪರ್ಕಕ್ಕೆ ಬಂದಿದ್ದು, ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಉದ್ದೇಶದ ಸಂಚಿನಲ್ಲಿ ಭಾಗಿಯಾಗಿದ್ದರೆಂಬ ಆರೋಪ ಕೇಳಿಬಂದಿದೆ. ಮುಂಬೈನ ಉದ್ಯಮಿಯೊಬ್ಬರ ಮೇಲೆ ದಾಳಿ ನಡೆಸುವ ಯೋಜನೆ ಕುರಿತು ತನಿಖೆ ನಡೆಯುತ್ತಿದೆ. ಗುಪ್ತಚರ ಇಲಾಖೆಯ ಮಾಹಿತಿ ಆಧರಿಸಿ ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು, ದಾವಣಗೆರೆ ರೈಲು ನಿಲ್ದಾಣ ಹಾಗೂ ತುಮಕೂರಿನಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದ್ದು, ಮೊಬೈಲ್ ಹಾಗೂ ಡಿಜಿಟಲ್ ಮಾಹಿತಿಗಳನ್ನು ಪರಿಶೀಲಿಸಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

