ಮಂಗಳೂರು: ಸಿಸಿಬಿ ಪೊಲೀಸರು ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ, 164 ಗ್ರಾಂ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಮಾದಕ ವಸ್ತುಗಳ ಮೌಲ್ಯ ಸುಮಾರು ₹16.40 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಾದ ಪ್ರಣಾಮ್ ಕೋಟ್ಯಾನ್ ಮತ್ತು ಧನರಾಜ್ ಪೂಜಾರಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಆರೋಪಿಗಳಿಂದ ಮಾದಕ ವಸ್ತು, ಮೊಬೈಲ್ ಫೋನ್, ಜಿಪ್-ಲಾಕ್ ಕವರ್ ಹಾಗೂ ಡಿಜಿಟಲ್ ತೂಕಮಾಪನ ಯಂತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರ ವಿರುದ್ಧ ಪ್ರತ್ಯೇಕ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿರುವ ಇತರರ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

