Breaking News

ಜೂಜು ಅಡ್ಡೆ ಮೇಲೆ ದಾಳಿ : 16 ಜನ ಪೊಲೀಸರ ವಶಕ್ಕೆ!

ಬೀದರ್ : ಎರಡು ಪ್ರತ್ಯೇಕ ಜೂಜಾಟದ ಅಡ್ಡೆ ಮೇಲೆ ದಾಳಿ ನಡೆಸಿದ ಗಾಂಧಿ ಗಂಜ್ ಠಾಣೆ ಪೊಲೀಸರು 16 ಜನರನ್ನು ವಶಕ್ಕೆ ಪಡೆದುಕೊಂಡಿದ್ಧಾರೆ. ಗಾಂಧಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ವಿಜಯಕುಮಾರ್ ಪಾಟೀಲ್ ಅವರ ಕಟ್ಟಡದ ಮೊದಲನೇ ಮಹಡಿಯಲ್ಲಿ 9 ರಿಂದ 10 ಜನರು ಜೂಜಾಟ ಆಡುತ್ತಿದ್ದಾರೆ ಎಂದು ದೊರೆತ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ 99,100 ರೂ. ನಗದು, 4 ಲಕ್ಷ ರೂ. ಮೌಲ್ಯದ ಕಾರು ಹಾಗೂ 1 ಲಕ್ಷ ರೂ. ಮೌಲ್ಯದ ಎರಡು ಸ್ಕೂಟರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ 9 ಆರೋಪಿಗಳನ್ನು ಬಂಧಿಸಿದ್ದಾರೆ. ಗಾಂಧಿಗಂಜ್‌ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ವಯೋಗ ಆಸ್ಪತ್ರೆ ಬಳಿ 6 ರಿಂದ7 ಜನರು ಜೂಜಾಟ ಆಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿದ ಪೊಲೀಸರು ಒಟ್ಟು 5,800 ರೂ. ಜಪ್ತಿ ಮಾಡಿ, 7 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಎರಡು ಪ್ರತ್ಯೇಕ ಪ್ರಕರಣದಲ್ಲಿ ಒಟ್ಟು 16 ಜನರನ್ನು ಬಂಧಿಸಿ, ಒಟ್ಟು 1,04,900 ನಗದು ಹಣ, 4 ಲಕ್ಷ ರೂ. ಮೌಲ್ಯದ ಕಾರು ಹಾಗೂ 1 ಲಕ್ಷ ರೂ. ಬೆಲೆ ಬಾಳುವ ಎರಡು ಸ್ಕೂಟರ್ ಜಪ್ತಿ ಮಾಡಿದ್ದಾರೆ. ಈ ಎರಡು ಘಟನೆಗಳಿಗೆ ಸಂಬಂಧಿಸಿದಂತೆ ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಯ್ಯೋ ಪಾಪ ಅಂದಿದ್ದೇ ತಪ್ಪಾಯ್ತು: ಎಂಬಿಬಿಎಸ್ ವಿದ್ಯಾರ್ಥಿನಿ ಸ್ನೇಹಿತೆಯ ಸೋಗಿನಲ್ಲಿ ಒಂದು ಲಕ್ಷ ರೂ. ವಂಚನೆ!

ವಿದೇಶದಲ್ಲಿ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯ ಕಾಲೇಜು ಶುಲ್ಕ ಪಾವತಿಸುವ ತುರ್ತು ಪರಿಸ್ಥಿತಿಯನ್ನು ಬಳಸಿಕೊಂಡು ಸೈಬರ್ ವಂಚಕರು ಬೆಂಗಳೂರಿನ ಕುಟುಂಬವೊಂದಕ್ಕೆ …

Leave a Reply

Your email address will not be published. Required fields are marked *