Breaking News

ಬೆಳ್ಳಂಬೆಳಗ್ಗೆ ರೌಡಿಶೀಟರ್‌ ಬರ್ಬರ ಹತ್ಯೆ ; ತಲ್ವಾರ್‌ನಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ತಲ್ವಾರ್‌ನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ. ಖಲೀಮ್ ಖಾನ್ (35) ಕೊಲೆಯಾದ ವ್ಯಕ್ತಿ. ಸೂಲಿಬೆಲೆಯಲ್ಲಿ ಹಣ್ಣಿನ ವ್ಯಾಪಾರ ನಡೆಸುತ್ತಿದ್ದ ಖಲೀಮ್ ಖಾನ್ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ತಲ್ವಾರ್‌ ಸೇರಿದಂತೆ ಮಾರಕಾಸ್ತ್ರಗಳನ್ನು ಬಳಸಿ ದೇಹದ ವಿವಿಧ ಭಾಗಗಳಿಗೆ ಸುಮಾರು 8ರಿಂದ 10 ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ದಾಳಿಯ ತೀವ್ರತೆಗೆ ಖಲೀಮ್ ಖಾನ್ ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಖಲೀಮ್ ಖಾನ್ ವಿರುದ್ಧ ಈ ಹಿಂದೆ ಹಲವು ಪ್ರಕರಣಗಳು ದಾಖಲಾಗಿದ್ದ ಹಿನ್ನೆಲೆಯಲ್ಲಿ ಅವರು ರೌಡಿಶೀಟರ್ ಆಗಿದ್ದರು ಎನ್ನಲಾಗಿದೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲೇ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ದುಷ್ಕರ್ಮಿಗಳು ಪೂರ್ವಯೋಜಿತವಾಗಿ ದಾಳಿ ನಡೆಸಿರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸೂಲಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ತನಿಖೆ ಕೈಗೊಳ್ಳಲಾಗಿದೆ. ಕೊಲೆ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿರುವ ಪೊಲೀಸರು, ಹತ್ಯೆಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ.

Share News

About BigTv News

Check Also

ಅಯ್ಯೋ ಪಾಪ ಅಂದಿದ್ದೇ ತಪ್ಪಾಯ್ತು: ಎಂಬಿಬಿಎಸ್ ವಿದ್ಯಾರ್ಥಿನಿ ಸ್ನೇಹಿತೆಯ ಸೋಗಿನಲ್ಲಿ ಒಂದು ಲಕ್ಷ ರೂ. ವಂಚನೆ!

ವಿದೇಶದಲ್ಲಿ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯ ಕಾಲೇಜು ಶುಲ್ಕ ಪಾವತಿಸುವ ತುರ್ತು ಪರಿಸ್ಥಿತಿಯನ್ನು ಬಳಸಿಕೊಂಡು ಸೈಬರ್ ವಂಚಕರು ಬೆಂಗಳೂರಿನ ಕುಟುಂಬವೊಂದಕ್ಕೆ …

Leave a Reply

Your email address will not be published. Required fields are marked *