ಕಲಬುರಗಿಯಲ್ಲಿ ಪೋಕ್ಸೊ ಪ್ರಕರಣದಲ್ಲಿ ಸಹಾಯ ಮಾಡುವುದಾಗಿ ಹೇಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಎಎಸ್‌ಐ ಶಿವಶರಣಪ್ಪ ಹಾಗೂ ಮಹಿಳಾ ಹೆಡ್ ಕಾನ್ಸ್‌ಟೇಬಲ್ ಜ್ಯೋತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ದೂರುದಾರರಿಂದ ಮೊದಲು ₹1,000 ಪಡೆದು, ಬಳಿಕ ₹10,000 ಲಂಚ ನೀಡುವಂತೆ ಒತ್ತಾಯಿಸಿದ ಆರೋಪದ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹಣ ಸ್ವೀಕರಿಸುವ ವೇಳೆ ಇಬ್ಬರನ್ನೂ ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಲೋಕಾಯುಕ್ತ ಎಸ್‌ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

