ಬಳ್ಳಾರಿಯ ಅಂದ್ರಾಳ ಹಳ್ಳದಲ್ಲಿ ಬ್ಯಾಂಕ್ ಉದ್ಯೋಗಿ ಅನಿಷ ಫಾತಿಮಾ (38) ಅವರ ಮೃತದೇಹ ನಿಗೂಢವಾಗಿ ಪತ್ತೆಯಾಗಿದ್ದು, ಪ್ರಕರಣ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ಸಹೋದ್ಯೋಗಿಗಳೊಂದಿಗೆ ಪಾರ್ಟಿಯಲ್ಲಿ ಭಾಗವಹಿಸಿದ್ದ ಅವರು ರಾತ್ರಿ ಪತಿಗೆ ಕರೆ ಮಾಡಿದ ಬಳಿಕ ಸಂಪರ್ಕಕ್ಕೆ ಸಿಕ್ಕಿರಲಿಲ್ಲ.
ಮರುದಿನ ಬೆಳಗ್ಗೆ ಅವರ ಶವ ಅಂದ್ರಾಳ ಹಳ್ಳದ ಸಮೀಪ ಪತ್ತೆಯಾಗಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಘಟನೆಯಿಂದ ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳು ಆಘಾತಕ್ಕೊಳಗಾಗಿದ್ದಾರೆ. ಎಪಿಎಂಸಿ ಠಾಣೆ ಪೊಲೀಸರು, ಶ್ವಾನದಳ ಹಾಗೂ ಎಫ್‌ಎಸ್‌ಎಲ್ ತಂಡ ಸ್ಥಳ ಪರಿಶೀಲನೆ ನಡೆಸಿ ಸಾಕ್ಷ್ಯ ಸಂಗ್ರಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
