Breaking News

ಅಯ್ಯೋ ಪಾಪ ಅಂದಿದ್ದೇ ತಪ್ಪಾಯ್ತು: ಎಂಬಿಬಿಎಸ್ ವಿದ್ಯಾರ್ಥಿನಿ ಸ್ನೇಹಿತೆಯ ಸೋಗಿನಲ್ಲಿ ಒಂದು ಲಕ್ಷ ರೂ. ವಂಚನೆ!

ವಿದೇಶದಲ್ಲಿ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯ ಕಾಲೇಜು ಶುಲ್ಕ ಪಾವತಿಸುವ ತುರ್ತು ಪರಿಸ್ಥಿತಿಯನ್ನು ಬಳಸಿಕೊಂಡು ಸೈಬರ್ ವಂಚಕರು ಬೆಂಗಳೂರಿನ ಕುಟುಂಬವೊಂದಕ್ಕೆ ₹1 ಲಕ್ಷ ವಂಚನೆ ಮಾಡಿದ್ದಾರೆ. ವಿದ್ಯಾರ್ಥಿನಿಯ ಸ್ನೇಹಿತೆ ಎಂದು ಪರಿಚಯಿಸಿಕೊಂಡ ಮಹಿಳೆ, ವಿದೇಶಿ ವಿನಿಮಯ ಶುಲ್ಕವಿಲ್ಲದೆ ಹಣ ತಲುಪಿಸುವುದಾಗಿ ನಂಬಿಸಿ ತನ್ನ ಪರಿಚಿತರ ಖಾತೆಗೆ ಹಣ ಜಮಾ ಮಾಡಿಸಿಕೊಂಡಿದ್ದಾಳೆ. ಹಣ ವರ್ಗಾವಣೆಯಾದ ಬಳಿಕ ಆಕೆ ಸಂಪರ್ಕ ಕಡಿತಗೊಳಿಸಿ ನಾಪತ್ತೆಯಾಗಿದ್ದಾಳೆ. ವಂಚನೆ ಅರಿತ ಬಳಿಕ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಬಿಎನ್‌ಎಸ್‌ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *