Breaking News

ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ ಪ್ರಕಟ

ದಾವಣಗೆರೆಯಲ್ಲಿ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಹಾಗೂ ₹15 ಸಾವಿರ ದಂಡ ವಿಧಿಸಿದೆ. 2023ರಲ್ಲಿ ಬಾಲಕಿಯನ್ನು ಪುಸಲಾಯಿಸಿ ಬಳ್ಳಾರಿ ಜಿಲ್ಲೆಯ ಕುಡಿತಿನಿಗೆ ಕರೆದೊಯ್ದು ದೌರ್ಜನ್ಯ ಎಸಗಿದ್ದ ಪ್ರಕರಣದಲ್ಲಿ ವಿರೂಪಾಕ್ಷಿ ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಬಿಳಿಚೋಡು ಠಾಣೆ ಪೊಲೀಸರು ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆ ಶಿಕ್ಷೆ ಪ್ರಕಟಿಸಿದ್ದಾರೆ.

Share News

About BigTv News

Check Also

ಬಳ್ಳಾರಿಯಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ : ಅತ್ಯಾಚಾರವೆಸಗಿ ಕೊಲೆ ಮಾಡಿರೋ ಶಂಕೆ!

ಬಳ್ಳಾರಿಯ ಅಂದ್ರಾಳ ಹಳ್ಳದಲ್ಲಿ ಬ್ಯಾಂಕ್ ಉದ್ಯೋಗಿ ಅನಿಷ ಫಾತಿಮಾ (38) ಅವರ ಮೃತದೇಹ ನಿಗೂಢವಾಗಿ ಪತ್ತೆಯಾಗಿದ್ದು, ಪ್ರಕರಣ ಜಿಲ್ಲೆಯಲ್ಲಿ ಆತಂಕ …

Leave a Reply

Your email address will not be published. Required fields are marked *