Breaking News

ಬೆಂಗಳೂರು: ಹಲ್ಲೆ ನಡೆಸಿ ಆಭರಣ ದೋಚಿದ್ದ ಆರೋ‍ಪಿ ಸೆರೆ

ಬೆಂಗಳೂರು: ಮನೆಗೆ ನುಗ್ಗಿ ಗೃಹಿಣಿಯ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಹಾಗೂ ಮೊಬೈಲ್ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಗೇನಹಳ್ಳಿಯ ಅಸ್ಲಂ ಪಾಷಾ ಬಂಧಿತನಾಗಿದ್ದು, ಆತನಿಂದ ₹6.70 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಸಿಐಎಲ್ ಲೇಔಟ್ ನಿವಾಸಿ ಜಯಶ್ರೀ ಅವರ ಮನೆಗೆ ನುಗ್ಗಿ ಕೃತ್ಯ ಎಸಗಿದ್ದ ಎನ್ನಲಾಗಿದೆ. ಮನೆಯ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದ ಮಂಗಳೂರು ಕೋರ್ಟ್!

ಮಂಗಳೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ …

Leave a Reply

Your email address will not be published. Required fields are marked *