Breaking News

ಬೆಂಗಳೂರು: ಹಲ್ಲೆ ನಡೆಸಿ ಆಭರಣ ದೋಚಿದ್ದ ಆರೋ‍ಪಿ ಸೆರೆ

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದ ಹೋಂಸ್ಟೇ ನಲ್ಲಿ ಮೈಸೂರಿನ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ವಿನುತಾ(27) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆ ನಿವಾಸಿಯಾಗಿರುವ ಜಗನ್ನಾಥ ಮತ್ತು ರೇಣುಕಾ ದಂಪತಿಯ ಪುತ್ರಿ ವಿನುತಾ ಸೇರಿದಂತೆ 14 ಜನರ ತಂಡ ಕೊಡಗು ಜಿಲ್ಲಾ ಪ್ರವಾಸಕ್ಕೆ ಬಂದಿದ್ದಾಗ ಘಟನೆ ನಡೆದಿದೆ. ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ ವಿನುತಾ ಕುಸಿದು ಬಿದ್ದು ಮೃತಪಟ್ಟಿದ್ದರು. ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಬಕೆಟ್ ಒಳಗೆ ತಲೆ ಮುಳುಗಿದ ಸ್ಥಿತಿಯಲ್ಲಿ ವಿನುತಾ ಶವ ಪತ್ತೆಯಾಗಿದೆ. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದ ಮಂಗಳೂರು ಕೋರ್ಟ್!

ಮಂಗಳೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ …

Leave a Reply

Your email address will not be published. Required fields are marked *