Breaking News

ಬೆಂಗಳೂರು | ನಕಲಿ ಅಂಕಪಟ್ಟಿ ಸೃಷ್ಟಿಸುವ ಜಾಲ ಪತ್ತೆ: ತನಿಖೆ ಚುರುಕು

ಬೆಂಗಳೂರು ನಗರದಲ್ಲಿ ನಕಲಿ ಅಂಕಪಟ್ಟಿ ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಮತ್ತೊಂದು ಬೃಹತ್ ಜಾಲವನ್ನು ಸಿಸಿಬಿ ವಿಶೇಷ ವಿಚಾರಣಾ ದಳ ಪತ್ತೆಹಚ್ಚಿದೆ. ಕೋರಮಂಗಲದ ಡಿಜಿಟಲ್ ಎಜುಕೇಷನ್ ಸಂಸ್ಥೆಯ ಮಾಲೀಕ ರಾಜಾ ರೆಡ್ಡಿ ಹಾಗೂ ಸಹಚರ ಆರ್ಯನ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆರೋಪಿಗಳು ಕಾಲೇಜು ವ್ಯಾಸಂಗ ಮಾಡದ ಅಭ್ಯರ್ಥಿಗಳಿಂದ ₹30 ಸಾವಿರದಿಂದ ₹50 ಸಾವಿರದವರೆಗೆ ಹಣ ಪಡೆದು ನಕಲಿ ಎಸ್‌ಎಸ್‌ಎಲ್‌ಸಿ, ಪಿಯು ಹಾಗೂ ಪದವಿ ಅಂಕಪಟ್ಟಿಗಳನ್ನು ಸೃಷ್ಟಿಸಿ ಮಾರಾಟ ಮಾಡುತ್ತಿದ್ದರು. 2025-26ನೇ ಸಾಲಿನಲ್ಲಿ 50ಕ್ಕೂ ಹೆಚ್ಚು ನಕಲಿ ಅಂಕಪಟ್ಟಿಗಳನ್ನು ಮಾರಾಟ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಜಾಲದಿಂದ ಸುಮಾರು ₹25 ಲಕ್ಷ ಸಂಗ್ರಹಿಸಿರುವ ಶಂಕೆ ವ್ಯಕ್ತವಾಗಿದ್ದು, ಇನ್ನಷ್ಟು ಅಭ್ಯರ್ಥಿಗಳಿಗೆ ನಕಲಿ ದಾಖಲೆಗಳನ್ನು ನೀಡಿರುವ ಸಾಧ್ಯತೆ ಕುರಿತು ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *