Breaking News

ಟೀ ಕುಡಿಯಲು ಹೋಗಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಶಿವಮೊಗ್ಗ: ಟೀ ಕುಡಿಯಲು ಹೋಗಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಭದ್ರಾವತಿಯಲ್ಲಿ ಸೋಮವಾರ (ಜೂ.08) ನಡೆದಿದೆ. ವಿಶ್ವ ಅಲಿಯಾಸ್ ಮುದ್ದೆ (35) ಹಲ್ಲೆಗೊಳಗಾದ ಯುವಕ. ಭದ್ರಾವತಿ ನಗರದ ಅನ್ವರ್ ಕಾಲೋನಿಯಲ್ಲಿ ಘಟನೆ ನಡೆದಿದೆ. ಭದ್ರಾವತಿ ಹಳದಮ್ಮ ಬೀದಿಯ ನಿವಾಸಿಯಾದ ವಿಶ್ವ ಟೀ ಕುಡಿಯಲು ಹೋಗಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಎರಡು ಕೈ ತುಂಡಾಗುವ ರೀತಿ ಹಾಗೂ ಕುತ್ತಿಗೆ ಭಾಗಕ್ಕೆ ಹರಿತವಾದ ಆಯುಧದಿಂದ ಹಲ್ಲೆ ಮಾಡಲಾಗಿದೆ. ಗಾಯಾಳು ವಿಶ್ವನಿಗೆ ಭದ್ರಾವತಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *