ಮುಂಬೈನ ದಾದರ್ ರೈಲು ನಿಲ್ದಾಣದ ಸಮೀಪ ಸೋಮವಾರ ಬೆಳಗ್ಗೆ ಬೆಸ್ಟ್ ಬಸ್ ನಿಯಂತ್ರಣ ತಪ್ಪಿ ಐದು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಯುವಕ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ವೇಗವಾಗಿ ಬಂದ ಬಸ್ ದ್ವಿಚಕ್ರ ವಾಹನ, ಎಲೆಕ್ಟ್ರಿಕ್ ಬೈಕ್, ಎಲೆಕ್ಟ್ರಿಕ್ ಕಾರು, ಟ್ಯಾಕ್ಸಿ ಹಾಗೂ ಬಲೆನೋ ಕಾರಿಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಸಿಯಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, 22-25 ವರ್ಷದ ಅಪರಿಚಿತ ಯುವಕ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮುಂಬೈ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಘಟನೆಯಿಂದ ಕೆಲಕಾಲ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

