ದೆಹಲಿ ವಿಶ್ವವಿದ್ಯಾಲಯದ ಮಹಿಳಾ ಸಹಾಯಕ ಪ್ರಾಧ್ಯಾಪಕಿಯೊಬ್ಬರನ್ನು ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಹತ್ಯೆ ಮಾಡಿರುವ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ದಂಪತಿ ಹಾಗೂ ಅವರ 13 ವರ್ಷದ ಮಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೂರ್ವ ದೆಹಲಿಯ ವಸುಂಧರಾ ಎನ್‌ಕ್ಲೇವ್‌ನಲ್ಲಿರುವ ಫ್ಲಾಟ್‌ನಲ್ಲಿ ಪ್ರಾಧ್ಯಾಪಕಿಯ ಶವ ರಕ್ತದ ಮಡುವಿನಲ್ಲಿ ಪತ್ತೆಯಾಗಿತ್ತು. ಬರ್ಧಮಾನ್‌ನಲ್ಲಿದ್ದ ಹಳೆಯ ಮನೆಯನ್ನು ಮಾರಲು ನಿರಾಕರಿಸಿದ್ದ ಕಾರಣ ಆರೋಪಿತ ದಂಪತಿ ಕೊಲೆಗೆ ಸಂಚು ರೂಪಿಸಿದ್ದರು ಎನ್ನಲಾಗಿದೆ. ದೆಹಲಿಗೆ ಬಂದು ಪರಿಚಯದ ನೆಪದಲ್ಲಿ ಫ್ಲಾಟ್‌ಗೆ ಪ್ರವೇಶಿಸಿ, ತಲೆಗೆ ಕಲ್ಲಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅಪಾರ್ಟ್‌ಮೆಂಟ್‌ನ ಸಿಸಿಟಿವಿ ದೃಶ್ಯಗಳು, ನಕಲಿ ದಾಖಲೆಗಳು ಹಾಗೂ ಮೊಬೈಲ್ ಲೊಕೇಶನ್ ಆಧರಿಸಿ ಪೊಲೀಸರು ಆರೋಪಿಗಳನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

