ದೆಹಲಿ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ₹5.38 ಕೋಟಿ ಮೌಲ್ಯದ 15.38 ಕೆ.ಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಎನ್ಡಿಪಿಎಸ್ ಕಾಯ್ದೆಯಡಿ ಬಂಧಿಸಲಾಗಿದೆ. ಕೌಲಾಲಂಪುರದಿಂದ ಬಂದ ಪ್ರಯಾಣಿಕರ ಬ್ಯಾಗ್ನಲ್ಲಿದ್ದ ಎರಡು ಗೀಸರ್ಗಳ ಒಳಗೆ ಗಾಂಜಾವನ್ನು ಅಡಗಿಸಿಡಲಾಗಿತ್ತು. ಅನುಮಾನಾಸ್ಪದ ವರ್ತನೆಯ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿದ ವೇಳೆ ಮಾದಕ ವಸ್ತು ಪತ್ತೆಯಾಗಿದೆ. 145 ವ್ಯಾಕ್ಯೂಮ್-ಸೀಲ್ಡ್ ಪ್ಯಾಕ್ಗಳಲ್ಲಿ ಸಂಗ್ರಹಿಸಿದ್ದ ಗಾಂಜಾವನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು, ಕಳ್ಳಸಾಗಣೆ ಜಾಲದ ಸಂಪರ್ಕಗಳ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

