ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾ ನ್ಯಾಯಾಲಯದ ಎದುರು ತಡರಾತ್ರಿ ರೌಡಿಶೀಟರ್ ಮಂಜೇಶ್ ಕುಮಾರ್ (43) ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದಿದ್ದಾರೆ. ಮೂಲತಃ ಹಾಸನ ಜಿಲ್ಲೆಯವರಾದ ಮಂಜೇಶ್ ಕುಟುಂಬದೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದು, ರೌಡಿಶೀಟರ್ ಆಗಿ ಗುರುತಿಸಿಕೊಂಡಿದ್ದರು. ಕೆಲಸದ ನಿಮಿತ್ತ ಹಾಸನಕ್ಕೆ ಬಂದಿದ್ದ ವೇಳೆ ಅವರನ್ನು ಹಿಂಬಾಲಿಸಿದ ದುಷ್ಕರ್ಮಿಗಳು, ಒಂಟಿಯಾಗಿದ್ದ ಸಂದರ್ಭದಲ್ಲಿ ದಾಳಿ ನಡೆಸಿ ತಲೆ, ಹೊಟ್ಟೆ ಹಾಗೂ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗೊಳಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಳೇ ದ್ವೇಷ ಅಥವಾ ವೈಯಕ್ತಿಕ ವೈಷಮ್ಯದ ಹಿನ್ನೆಲೆಯಲ್ಲಿ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

