Breaking News

ಪೇಂಟ್ ಹೊಡೆಯುವ ನೆಪದಲ್ಲಿ ಬಂದವರು ಕೇವಲ 5 ನಿಮಿಷದ ಗ್ಯಾಪ್‌ನಲ್ಲಿ 25 ಲಕ್ಷ ರೂ. ಮೌಲ್ಯದ ಚಿನ್ನಾಭರಣದೊಂದಿಗೆ ಎಸ್ಕೇಪ್

ಬೆಂಗಳೂರು ಉತ್ತರ ತಾಲೂಕಿನ ರಾಮಾಂಜನೇಯ ಬಡಾವಣೆಯಲ್ಲಿ ಮನೆಗೆ ಬಣ್ಣ ಬಳಿಯುವ ನೆಪದಲ್ಲಿ ಬಂದ ಪೇಂಟರ್‌ಗಳು ಸುಮಾರು ₹25 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ನಿತ್ಯಾ ಮತ್ತು ಚಂದ್ರಶೇಖರ್ ದಂಪತಿಗಳ ಮನೆಯಲ್ಲಿ ಈ ಕಳ್ಳತನ ನಡೆದಿದ್ದು, 254 ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿವೆ. ಮನೆಗೆ ಪೇಂಟಿಂಗ್ ಕೆಲಸಕ್ಕೆ ಬಂದ ಲಿಂಗರಾಜು ಹಾಗೂ ಆತನ ಸಹಚರರು, ಮಾಲೀಕರ ವಿಶ್ವಾಸ ಗಳಿಸಿ ಕೆಲಸ ಮಾಡುತ್ತಿದ್ದರು. ಈ ವೇಳೆ ಬೆಡ್‌ರೂಮ್‌ನಲ್ಲಿ ಪೇಂಟಿಂಗ್ ನಡೆಯುತ್ತಿದ್ದಾಗ ನಿತ್ಯಾ ಕೆಲ ನಿಮಿಷ ಹೊರಗೆ ಹೋದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಬೀರುವಿನಲ್ಲಿದ್ದ ಚಿನ್ನಾಭರಣಗಳನ್ನು ದೋಚಿದ್ದಾರೆ ಎನ್ನಲಾಗಿದೆ. ಪೇಂಟರ್‌ಗಳು ಕೆಲಸ ಮುಗಿಯುವ ಮುನ್ನವೇ ನಾಪತ್ತೆಯಾಗಿದ್ದು, ಬಳಿಕ ಕಳ್ಳತನ ಬೆಳಕಿಗೆ ಬಂದಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

Share News

About BigTv News

Check Also

ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು

ಮೈಸೂರು: ಕೇರಳದಲ್ಲಿ ಪ್ರಗತಿಪರ ಯುವ ರೈತ ಪ್ರಶಸ್ತಿ ಪಡೆದಿದ್ದ 31 ವರ್ಷದ ಧನೇಶ್ ಎಸ್. ನಾಯರ್ ಅಲಿಯಾಸ್ ಡ್ಯಾನಿ, ಮೈಸೂರಿನ …

Leave a Reply

Your email address will not be published. Required fields are marked *