Breaking News

ಬೆಂಗಳೂರು | ಸೂಪರ್ ಮಾರ್ಕೆಟ್‌ಗೆ ನುಗ್ಗಿ ದರೋಡೆಗೆ ಯತ್ನ: ಮೂವರ ಸೆರೆ

ಬೆಂಗಳೂರು: ಸೂಪರ್ ಮಾರ್ಕೆಟ್‌ಗೆ ನುಗ್ಗಿ ದರೋಡೆಗೆ ಯತ್ನಿಸಿದ್ದ ಮೂವರು ಆರೋಪಿಗಳನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ಆಸೀಫ್ (22), ಸೈಯದ್ ಸಲೀಂ (26) ಹಾಗೂ ಸಿದ್ದಿಕ್ ಪಾಷಾ (23) ಬಂಧಿತರು. ಜೂನ್ 6ರಂದು ಅರಕೆರೆಯ ‘ಎ ಡೈಲಿ ನೀಡ್ಸ್ ಸೂಪರ್ ಮಾರ್ಕೆಟ್’ಗೆ ಗ್ರಾಹಕರ ಸೋಗಿನಲ್ಲಿ ಬಂದ ಆರೋಪಿಗಳು ಕ್ಯಾಶ್ ಕೌಂಟರ್‌ನಲ್ಲಿದ್ದ ಹಣ ದೋಚಲು ಯತ್ನಿಸಿದ್ದಾರೆ. ಇದನ್ನು ತಡೆದ ಕ್ಯಾಶಿಯರ್ ಮೇಲೆ ಹಲ್ಲೆ ನಡೆಸಿ ಹಣ, ಚಾಕೊಲೇಟ್ ಹಾಗೂ ಪರ್ಫ್ಯೂಮ್ ಬಾಟಲಿಗಳನ್ನು ದೋಚಿ ಪರಾರಿಯಾಗಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಮುಂದಿನ ತನಿಖೆ ಮುಂದುವರಿದಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *