Breaking News

ಬಳ್ಳಾರಿಯಲ್ಲಿ ಯುವಕನ ಭೀಕರ ಹತ್ಯೆ: ಶವಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಬಳ್ಳಾರಿ: ಯುವಕನನ್ನು ಹತ್ಯೆಗೈದು ಸಾಕ್ಷ್ಯ ನಾಶ ಮಾಡಲು ಮೃತದೇಹವನ್ನು 13 ಕಿ.ಮೀ ದೂರ ಸಾಗಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ತಾಲೂಕಿನ ಎಲ್‌ಎಲ್ಸಿ ಕಾಲುವೆ ಬಳಿ ಬೆಳಕಿಗೆ ಬಂದಿದೆ. ಅನಂತಪುರ ಜಿಲ್ಲೆಯ ಬೊಲ್ಲನಗುಡ್ಡಂ ನಿವಾಸಿ ಬಸವನಗೌಡ (27) ಮೃತ ಯುವಕ ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಪೂರ್ವಯೋಜಿತವಾಗಿ ಕೃತ್ಯ ಎಸಗಿದ್ದರೂ, ಶನಿವಾರ ಸುರಿದ ಮಳೆಯಿಂದ ಬೆಂಕಿ ನಂದಿಹೋಗಿ ಮೃತದೇಹ ಅರ್ಧ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪ್ರೀತಿ-ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ಹತ್ಯೆ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮೃತದೇಹ ಪತ್ತೆಯಾದ ಸ್ಥಳದಿಂದ 13 ಕಿ.ಮೀ ದೂರದಲ್ಲಿ ಬಸವನಗೌಡ ಅವರಿಗೆ ಸೇರಿದ ಪಲ್ಸರ್ ಬೈಕ್ ಹಾಗೂ ಚಪ್ಪಲಿಗಳು ಪತ್ತೆಯಾಗಿವೆ. ಈ ಕುರಿತು ಮೋಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *