Breaking News

ಆಂಧ್ರಪ್ರದೇಶ | ವಿಶಾಖಪಟ್ಟಣಂ ಉಕ್ಕು ಸ್ಥಾವರದಲ್ಲಿ ಬೆಂಕಿ: 8 ಮಂದಿ ಸಾವು

ಆಂಧ್ರ ಪ್ರದೇಶದ ಅನಕ‍ಪಲ್ಲೆ ಜಿಲ್ಲೆಯ ವಿಶಾಖಪಟ್ಟಣಂ ಉಕ್ಕಿನ ಸ್ಥಾವರದಲ್ಲಿ (ವಿಎಸ್‌ಪಿ) ಸೋಮವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 8 ಮಂದಿ ಕಾರ್ಮಿಕರು ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಉಕ್ಕನ್ನು ಕರಗಿಸುವ ಘಟಕದಲ್ಲಿನ ಉಷ್ಣ ನಿರೋಧಕ ಕೊಳಗದಿಂದ ದ್ರವ ರೂಪದ ಲೋಹ ಸೋರಿಕೆಯಾಗಿರುವ ಪರಿಣಾಮ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಘಟನೆ ನಡೆದಾಗ 20 ಮಂದಿ ಕಾರ್ಮಿಕರು ಸ್ಥಳದಲ್ಲಿದ್ದರು. ಈ ಪೈಕಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, 8 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತಪಟ್ಟಿರುವವರು ಕಾರ್ಖಾನೆಯ ಕಾರ್ಮಿಕರೋ, ಹೊರಗುತ್ತಿಗೆ ನೌಕರರೋ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಕಾರ್ಮಿಕ ಸಂಘಟನೆ ತಿಳಿಸಿದೆ. ಅವಘಡಕ್ಕೆ ನಿಜವಾದ ಕಾರಣ ಪತ್ತೆಹಚ್ಚಲು ಸೂಕ್ತ ತನಿಖೆ ನಡೆಸಬೇಕೆಂದೂ ಆಗ್ರಹಿಸಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *