Breaking News

ಹೊಸಕೋಟೆ-ಕೋಲಾರ ಹೆದ್ದಾರಿಯಲ್ಲಿ ಬಸ್-ಕಂಟೈನರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ

ಹೊಸಕೋಟೆ ಮತ್ತು ಕೋಲಾರ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಏಕಾಏಕಿ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಕಂಟೈನರ್‌ಗೆ ಕೋಲಾರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಬಸ್‌ನಲ್ಲಿದ್ದ ಆರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ.ಕಂಟೈನರ್‌ ಯೂಟರ್ನ್‌ ತೆಗೆದುಕೊಂಡಿದ್ದನ್ನು ಗಮನಿಸಿದ ಬಸ್‌ ಚಾಲಕ ಸಮಯ ಪ್ರಜ್ಞೆಯಿಂದ ವೇಗ ನಿಯಂತ್ರಿಸಿದ್ದರಿಂದ ಅವಘಡ ತಪ್ಪಿದೆ. ಕಂಟೈನರ್ ಚಾಲಕ ಮತ್ತು ಕ್ಲೀನರ್ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದರು. ಬಸ್‌ನಲ್ಲಿದ್ದ 70ಕ್ಕೂ ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಆರು ಮಂದಿಯನ್ನು ಹೊಸಕೋಟೆಯ ಎಂವಿಜೆ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲಾಗಿದೆ. ಡಿಕ್ಕಿ ರಭಸಕ್ಕೆ ಬಸ್ ಮುಂಭಾಗ ಜಖಂ ಆಗಿದೆ. ಅಪಘಾತದಿಂದ ಒಂದೂವರೆ ಗಂಟೆ ಯಾದರರೂ ಲ್ಯಾಂಕೋ, ಪೊಲೀಸ್ ಹಾಗೂ 112 ಸಿಬ್ಬಂದಿ ಸ್ಥಳಕ್ಕೆ ಬರಲಿಲ್ಲ. ಹೀಗಾಗಿ 3 ಕಿ.ಮೀ. ವಾಹನ ದಟ್ಟಣೆ ಉಮಟಾಗಿತ್ತು. ಕೊನೆಗೆ ಸ್ಥಳಕ್ಕೆ ಸಮೀಪದಲ್ಲಿದ್ದ ವೊಲ್ವೋ ಕಂಪನಿಯ ಸಿಬ್ಬಂದಿ ತಮ್ಮ ಖಾಸಗಿ ಆಂಬುಲೆನ್ಸ್ ಕಳುಹಿಸಿ ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *