ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ಕೋಟೇಶ್ವರ ಅಂಡರ್‌ಪಾಸ್‌ನಲ್ಲಿ ಬೈಕ್ ಹಾಗೂ 10 ಚಕ್ರದ ಗೂಡ್ಸ್ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಪ್ರದೀಪ್ ಪೂಜಾರಿ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೋಮವಾರ ಸಂಜೆ ಈ ದುರ್ಘಟನೆ ನಡೆದಿದೆ. ಪ್ರದೀಪ್ ಪೂಜಾರಿ ಕೋಟೇಶ್ವರದ ಮಾರ್ಕೋಡಿ ನಿವಾಸಿಯಾಗಿದ್ದು, ಗಾರೆ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದರು. ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ. ಕೋಟೇಶ್ವರ ಅಂಡರ್‌ಪಾಸ್‌ನಲ್ಲಿ ಭಾರಿ ವಾಹನಗಳ ಸಂಚಾರದಿಂದ ಆಗಾಗ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ, 10 ಚಕ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

