Breaking News

ಇಸ್ಪೀಟ್‌ ಅಡ್ಡೆ ಮೇಲೆ ದಾಳಿ: ₹13.07 ಲಕ್ಷ ಮೌಲ್ಯದ ವಸ್ತು ವಶ

ಹೆಬ್ರಿ: ಹೊಸೂರು ಪ್ರದೇಶದಲ್ಲಿದ್ದ ಇಸ್ಪೀಟು ಜೂಜಾಟ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ₹13.07 ಲಕ್ಷ ಮೌಲ್ಯದ ನಗದು, ವಾಹನಗಳು, ಮೊಬೈಲ್‌ಗಳು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಕಾರ್ಕಳ ಪೊಲೀಸ್ ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ವಿಜೇಶ್‌, ದಸ್ತಗೀರ್‌ ಹಾಗೂ ರೋಹಿತ್‌ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಜೂಜಾಟಕ್ಕೆ ಬಳಸಿದ್ದ ₹23,970 ನಗದು ಸೇರಿದಂತೆ ಹಲವು ವಾಹನಗಳು ಮತ್ತು ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ. ದಾಳಿ ವೇಳೆ ಹಲವರು ಪರಾರಿಯಾಗಿದ್ದು, ಅವರ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *