Breaking News

ಶಾಸಕ ಬಿ.ಕೆ. ಸಂಗಮೇಶ್ ಆಪ್ತನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ಹಲ್ಲೆ!

ಭದ್ರಾವತಿ: ಶಾಸಕ ಬಿ.ಕೆ. ಸಂಗಮೇಶ್ವರ ಅವರ ಪುತ್ರನ ಆಪ್ತ ವಿಶ್ವ ಎಂಬಾತನ ಮೇಲೆ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನ್ವರ್ ಕಾಲೋನಿ ರಸ್ತೆಯಲ್ಲಿ ಕಾರಿನಲ್ಲಿ ಬಂದ ನಾಲ್ಕೈದು ಮಂದಿ ವಿಶ್ವನನ್ನು ಅಡ್ಡಗಟ್ಟಿ ಮಚ್ಚು-ಲಾಂಗ್‌ಗಳಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ತಲೆ, ಕೈ ಹಾಗೂ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಹಳೇ ವೈಷಮ್ಯ ಹಾಗೂ ಸ್ಥಳೀಯ ರಾಜಕೀಯ ಕಾರಣದಿಂದ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಭದ್ರಾವತಿ ಓಲ್ಡ್ ಟೌನ್ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *