Breaking News

ಅಲ್ಲೇ ಡ್ರಾ, ಅಲ್ಲೇ ಬಹುಮಾನ! ಚುಡಾಯಿಸಿದ ಅಂಕಲ್ ಮೇಲೆ ಖಾರದಪುಡಿ ಎರಚಿ ಗುಮ್ಮಿದ ಲೇಡಿ!

ರಾಯಚೂರು: ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯರನ್ನು ಕಿರುಕುಳ ನೀಡುವವರ ವಿರುದ್ಧ ಧೈರ್ಯದಿಂದ ಪ್ರತಿರೋಧ ವ್ಯಕ್ತಪಡಿಸಿದ ಘಟನೆ ರಾಯಚೂರಿನ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ರಾಜು ಬೊಮ್ಮನಾಳ ಎಂಬಾತ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿ ಚುಡಾಯಿಸಿದ್ದಾನೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಮಹಿಳೆ ಹತ್ತಿರದ ಹೋಟೆಲ್‌ನಿಂದ ಖಾರದ ಪುಡಿ ತಂದು ಆತನ ಕಣ್ಣಿಗೆ ಎರಚಿದ್ದಾರೆ. ಬಳಿಕ ಅಲ್ಲೇ ಇದ್ದ ಕಟ್ಟಿಗೆಯನ್ನು ತೆಗೆದುಕೊಂಡು ಸಾರ್ವಜನಿಕರ ಎದುರೇ ಆತನಿಗೆ ಥಳಿಸಿ ತನ್ನ ಆಕ್ರೋಶ ಹೊರಹಾಕಿದ್ದಾರೆ. ಜಗಳ ಬಿಡಿಸಲು ಬಂದವರಿಗೂ ಮಹಿಳೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, “ನನ್ನ ಮೇಲೆ ಕೇಸ್ ಹಾಕಿದರೂ ಪರವಾಗಿಲ್ಲ, ಇವನನ್ನು ಸುಮ್ಮನೆ ಬಿಡಲ್ಲ” ಎಂದು ಹೇಳಿದ್ದಾಗಿ ತಿಳಿದುಬಂದಿದೆ. ಸದರಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *