Breaking News

ಬೆಂಗಳೂರು ಹೊರವಲಯದಲ್ಲಿ ರಾಶಿ ರಾಶಿ ಜಿಲೆಟಿನ್ ಕಡ್ಡಿಗಳು ಪತ್ತೆ: ಸಾರ್ವಜನಿಕರಲ್ಲಿ ಆತಂಕ

ಬೆಂಗಳೂರು: ನಗರದ ಗಡಿಭಾಗದ ಅವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ನೂರಕ್ಕೂ ಹೆಚ್ಚು ಜಿಲೆಟಿನ್ ಕಡ್ಡಿಗಳು ಹಾಗೂ ವೈಯರ್‌ಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸ್ಫೋಟಕಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಭಾಗದಲ್ಲಿ ಕಲ್ಲು ಕ್ವಾರಿ ಹಾಗೂ ಬಂಡೆ ಒಡೆಯುವ ಚಟುವಟಿಕೆಗಳು ನಡೆಯುವ ಹಿನ್ನೆಲೆ, ಅಕ್ರಮವಾಗಿ ಸಂಗ್ರಹಿಸಿಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಇಷ್ಟೊಂದು ಪ್ರಮಾಣದ ಸ್ಫೋಟಕಗಳನ್ನು ಇಟ್ಟಿರುವುದು ಅನುಮಾನಗಳಿಗೆ ಕಾರಣವಾಗಿದೆ. ಈ ಸಂಬಂಧ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಎಫ್‌ಎಸ್‌ಎಲ್ ಹಾಗೂ ಬಾಂಬ್ ಪತ್ತೆ ದಳದ ಸಿಬ್ಬಂದಿಯೂ ಸ್ಥಳ ಪರಿಶೀಲನೆ ನಡೆಸಿ ಸ್ಫೋಟಕಗಳ ಮೂಲ ಮತ್ತು ಉದ್ದೇಶ ಪತ್ತೆಗೆ ಮುಂದಾಗಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *