Breaking News

ದಾವಣಗೆರೆಯಲ್ಲಿ ನೀಚ ಕೃತ್ಯ; ಪತಿಯೊಂದಿಗೆ ಜಗಳವಾಡಿ ತವರಿಗೆ ಹೋಗುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್!

ದಾವಣಗೆರೆ: ಪತಿಯೊಂದಿಗೆ ಜಗಳವಾಡಿ ತವರಿಗೆ ತೆರಳುತ್ತಿದ್ದ 41 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಡಿ ದಾವಣಗೆರೆ ಜಿಲ್ಲೆಯ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಗೆ ತಂಪು ಪಾನೀಯದಲ್ಲಿ ಮದ್ಯ ಬೆರೆಸಿ ಕುಡಿಸಿ, ಬಳಿಕ ತೋಟಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಘಟನೆಯ ಬಳಿಕ ಆರೋಪಿಗಳು ಫೋಟೋ ಹಾಗೂ ವಿಡಿಯೊಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ ಎನ್ನಲಾಗಿದೆ. ಸಂತ್ರಸ್ತೆಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಸ್ತ್ರೀ ನಾಗರಾಜ್ ಸೇರಿ 10 ಆರೋಪಿಗಳನ್ನು ಬಂಧಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ. ಶೇಖರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *