Breaking News

ನಕಲಿ ಆಯಿಲ್​ ತಯಾರಿಸುತ್ತಿದ್ದ ಟಕ ಪತ್ತೆ

ಚಿಕ್ಕಬಳ್ಳಾಪುರ: ಕೃಷಿಗೆ ಸಬ್ಸಿಡಿ ದರದಲ್ಲಿ ಪೂರೈಕೆಯಾಗುವ ಯೂರಿಯಾ ಗೊಬ್ಬರ ಬಳಸಿ ನಕಲಿ ವಾಹನ ಆಯಿಲ್ ತಯಾರಿಸುತ್ತಿದ್ದ ಅಕ್ರಮ ಘಟಕದ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಚದಲಪುರ ಸಮೀಪದ ಘಟಕದಲ್ಲಿ 260 ಯೂರಿಯಾ ಮೂಟೆಗಳು, ವಿವಿಧ ವಾಹನ ಕಂಪನಿಗಳ ಲೇಬಲ್‌ಗಳು ಹಾಗೂ ಇತರೆ ಸಾಮಗ್ರಿಗಳು ಪತ್ತೆಯಾಗಿವೆ. ಈ ಘಟಕಕ್ಕೆ ಯಾವುದೇ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದು, ನಂದಿ ಗಿರಿಧಾಮ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ರಾಜಸ್ಥಾನ ಮೂಲದ ವ್ಯಕ್ತಿಗಳು ಜಾಗವನ್ನು ಬಾಡಿಗೆಗೆ ಪಡೆದು ಅಕ್ರಮ ದಂಧೆ ನಡೆಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *