ಚಿಕ್ಕಮಗಳೂರು: ಅಜ್ಜಂಪುರ ಪಟ್ಟಣದಲ್ಲಿ ದ್ವಿಚಕ್ರ ವಾಹನವನ್ನು ವೇಗವಾಗಿ ಚಲಾಯಿಸಿದ್ದಾನೆ ಎಂಬ ಕಾರಣಕ್ಕೆ ಯುವಕನ ಮೇಲೆ ಕಬ್ಬಿಣದ ರಾಡ್ ಹಾಗೂ ಲಾಠಿಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹಲ್ಲೆಯಲ್ಲಿ ಗಾಯಗೊಂಡ ಮೊಹಮ್ಮದ್ ಜೈದ್ ಅವರ ಬಲಗೈ ಮೂಳೆ ಮುರಿದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತೋಷ್ ಮಾಳೆ ಎಂಬಾತ ಯುವಕನನ್ನು ಅವಾಚ್ಯವಾಗಿ ನಿಂದಿಸಿ, ಲಾಠಿ ಮತ್ತು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.bಘಟನೆ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಪ್ರಕರಣದ ವಿರುದ್ಧ ಆಕ್ರೋಶಗೊಂಡ ಸಾರ್ವಜನಿಕರು ಅಜ್ಜಂಪುರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

