ಫಿರೋಜಾಬಾದ್ (ಉತ್ತರ ಪ್ರದೇಶ): ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಮಸೀದಿಯ ಧರ್ಮಗುರು ಜಾಕೀರ್ ಅಲಿ (48) ವಿರುದ್ಧ ಪೋಕ್ಸೊ ಹಾಗೂ ಬಿಎನ್‌ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯ ಕುಟುಂಬದ ದೂರಿನ ಪ್ರಕಾರ, ಆರೋಪಿ ಬಾಲಕಿಯನ್ನು ಮಸೀದಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು, ಬಂಧನಕ್ಕಾಗಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ರಾಮಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣದ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

