ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 40ಕ್ಕೂ ಹೆಚ್ಚು ಅಭ್ಯರ್ಥಿಗಳಿಂದ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪದಡಿ ತಂದೆ-ಮಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರ್.ಟಿ.ನಗರದ ಎಂ.ಎ. ಮನ್ಸೂರ್ ಅಹಮದ್ (75) ಮತ್ತು ಅವರ ಪುತ್ರಿ ಶಂಶಾದ್ ಬೇಗಂ (48) ಬಂಧಿತರಾಗಿದ್ದು, ಇದುವರೆಗೆ ಸುಮಾರು ₹5.30 ಕೋಟಿ ವಂಚನೆ ನಡೆಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ನಕಲಿ ನೇಮಕಾತಿ ಪತ್ರಗಳನ್ನು ನೀಡಿ ಅಭ್ಯರ್ಥಿಗಳನ್ನು ವಂಚಿಸುತ್ತಿದ್ದರೆಂದು ಆರೋಪಿಸಲಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದ್ದು, ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

