Breaking News

ನಿವೃತ್ತ ಯೋಧನಿಗೆ ಅಪಮಾನ – ನಡುರಸ್ತೆಯಲ್ಲಿ ಪೊಲೀಸರಿಂದ ಕಿರುಕುಳ ಆರೋಪ!

ಗುರುಗ್ರಾಮ: ನಿವೃತ್ತ ಸೇನಾ ಮೇಜರ್ ಹಮೇಂದ್ರ ಸಿಂಗ್ ಹಾಗೂ ಅವರ ಕುಟುಂಬಕ್ಕೆ ಸಂಚಾರಿ ಪೊಲೀಸರು ತಡರಾತ್ರಿ ಸುಮಾರು ಒಂದೂವರೆ ಗಂಟೆ ಕಾಲ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಜೂನ್ 7ರಂದು ಪತ್ನಿ ಮತ್ತು ಇಬ್ಬರು ಪುತ್ರಿಯರೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಡ್ರಂಕ್ ಅಂಡ್ ಡ್ರೈವ್ ತಪಾಸಣೆಗೆ ಪೊಲೀಸರು ಕಾರು ತಡೆದಿದ್ದಾರೆ. ಪರೀಕ್ಷೆಯಲ್ಲಿ ಆಲ್ಕೋಹಾಲ್ ಪ್ರಮಾಣ 13 mg/100 ml ಮಾತ್ರ ಕಂಡುಬಂದಿದ್ದು, ಇದು ಕಾನೂನುಬದ್ಧ ಮಿತಿಯೊಳಗೇ ಇತ್ತು. ಯಾವುದೇ ನಿಯಮ ಉಲ್ಲಂಘನೆ ಮಾಡದಿದ್ದರೂ ಪೊಲೀಸರು ಕುಟುಂಬವನ್ನು ಸುಮಾರು 1.5 ಗಂಟೆಗಳ ಕಾಲ ರಸ್ತೆಯಲ್ಲೇ ತಡೆದು ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಮೇಜರ್ ಹಮೇಂದ್ರ ಸಿಂಗ್ ಆರೋಪಿಸಿದ್ದಾರೆ. ಘಟನೆ ಕುರಿತು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *