ಗೋಕಾಕ್: ರೌಡಿಶೀಟರ್‌ಗಳ ವಿರುದ್ಧ ಬೆಳಗಾವಿ ಜಿಲ್ಲೆಯ ಗೋಕಾಕ್ ಪೊಲೀಸರು ಬುಧವಾರ ಮುಂಜಾನೆ ದಿಢೀರ್ ಕಾರ್ಯಾಚರಣೆ ನಡೆಸಿ 10ಕ್ಕೂ ಹೆಚ್ಚು ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಡಿವೈಎಸ್ಪಿ ನೇತೃತ್ವದ ವಿಶೇಷ ತಂಡಗಳು ರೌಡಿಶೀಟರ್‌ಗಳ ಮನೆಗಳನ್ನು ಪರಿಶೀಲಿಸಿ, ಅವರ ಚಟುವಟಿಕೆಗಳ ಬಗ್ಗೆ ವಿಚಾರಣೆ ನಡೆಸಿವೆ. ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನಿನ ಮೇಲೆ ಹೊರಗಿರುವವರ ಮೇಲೆ ನಿಗಾ ಇಡುವ ಉದ್ದೇಶದಿಂದ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಇಂತಹ ಕಾರ್ಯಾಚರಣೆಗಳನ್ನು ಮುಂದುವರಿಸಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

