Breaking News

ತೀರ್ಥಹಳ್ಳಿ: ಕಾರಿನಲ್ಲಿ ದನ ಕಳ್ಳತನಕ್ಕೆ ಯತ್ನ: ಡ್ಯಾಶ್‌ಕ್ಯಾಮ್‌ನಲ್ಲಿ ಕಳ್ಳರ ಕೃತ್ಯ ಸೆರೆ

ತೀರ್ಥಹಳ್ಳಿ: ಗಡಿಕಲ್ ಪ್ರದೇಶದಲ್ಲಿ ತಡರಾತ್ರಿ ದನ ಕಳ್ಳತನಕ್ಕೆ ಯತ್ನಿಸಿದ ಘಟನೆ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಕಳ್ಳರು ದನವನ್ನು ಕಾರಿನೊಳಗೆ ತುಂಬಲು ಯತ್ನಿಸುತ್ತಿದ್ದ ವೇಳೆ ಎದುರಿನಿಂದ ವಾಹನ ಬರುತ್ತಿರುವುದನ್ನು ಕಂಡು, ದನವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಾಲೂಕಿನಲ್ಲಿ ಜಾನುವಾರು ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕಳ್ಳರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *