Breaking News

ಬೆಂಗಳೂರಿನ ಉದ್ಯಮಿ ಮನೆಯಲ್ಲಿ 25 ಲಕ್ಷ ಕಳ್ಳತನ: ಪರಾರಿಯಾಗಿದ್ದ ದಂಪತಿ ಅರೆಸ್ಟ್!

ಬೆಂಗಳೂರು: ಉದ್ಯಮಿ ಮನೆಯಲ್ಲೇ ಕೆಲಸ ಮಾಡುತ್ತಿದ್ದ ದಂಪತಿ ₹25 ಲಕ್ಷ ನಗದು ಕಳವು ಮಾಡಿದ ಆರೋಪದಲ್ಲಿ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ನೇಪಾಳ ಮೂಲದ ಪವನ್ ಬಿಸ್ತಾ ಮತ್ತು ಸೀತಾ ಬಿಸ್ತಾ. ಉದ್ಯಮಿ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಇವರು, ಹಣ ಇಟ್ಟಿದ್ದ ಸ್ಥಳ ಹಾಗೂ ಕೀಲಿಯ ಮಾಹಿತಿ ತಿಳಿದುಕೊಂಡು, ಮನೆಯವರ ಗೈರುಹಾಜರಿಯಲ್ಲಿ ಕಬೋರ್ಡ್‌ನಿಂದ ₹25 ಲಕ್ಷ ನಗದು ಕಳವು ಮಾಡಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡ ಅಮೃತಹಳ್ಳಿ ಪೊಲೀಸರು ಆರೋಪಿಗಳನ್ನು ಬೆಂಗಳೂರು ತೊರೆಯುವ ಮುನ್ನವೇ ಬಂಧಿಸಿದ್ದು, ಕಳವಾಗಿದ್ದ ಸಂಪೂರ್ಣ ₹25 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ತನಿಖೆ ಮುಂದುವರಿದಿದೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *