ಕೊಪ್ಪಳ: ಅಪ್ರಾಪ್ತ ಬಾಲಕನಿಗೆ ಸಿಗರೇಟ್ ಅಭ್ಯಾಸ ಮಾಡಿಸಿ, ಬಳಿಕ ವಿಡಿಯೋ ತೋರಿಸಿ ಬ್ಲಾಕ್‌ಮೇಲ್ ಮಾಡಿ 120 ಗ್ರಾಂ ಚಿನ್ನಾಭರಣ ದೋಚಿದ್ದ ಇಬ್ಬರು ಆರೋಪಿಗಳನ್ನು ಕುಷ್ಟಗಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಬಸವರಾಜ್ ಅಂಗಡಿ ಹಾಗೂ ನವೀನ್, ಬಾಲಕ ಸಿಗರೇಟ್ ಸೇದುತ್ತಿದ್ದ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದು, ಪೋಷಕರಿಗೆ ತೋರಿಸುವುದಾಗಿ ಬೆದರಿಸಿ ಹಣಕ್ಕಾಗಿ ಪೀಡಿಸುತ್ತಿದ್ದರು. ಭಯಗೊಂಡ ಬಾಲಕ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಹಂತ ಹಂತವಾಗಿ ಕದ್ದು ಆರೋಪಿಗಳಿಗೆ ನೀಡಿದ್ದಾನೆ. ಮನೆಯಲ್ಲಿ ಚಿನ್ನ ನಾಪತ್ತೆಯಾದ ಹಿನ್ನೆಲೆಯಲ್ಲಿ ಪೋಷಕರು ದೂರು ನೀಡಿದ್ದು, ತನಿಖೆ ವೇಳೆ ಪ್ರಕರಣ ಬಯಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿ, 120 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

