ಬಳ್ಳಾರಿ ಗಡಿ ಭಾಗದಲ್ಲಿ ಲಾರಿ ಮತ್ತು ಟ್ಯಾಂಕರ್ ನಡುವೆ ಭೀಕರವಾದ ಅಪಘಾತ ಸಂಭವಿಸಿದ್ದು, ಬೆಂಕಿಯಿಂದ ಎರಡು ವಾಹನಗಳು ಹೊತ್ತಿ ಉರಿದಿವೆ. ಘಟನೆಯಲ್ಲಿ ಓರ್ವ ಚಾಲಕ ಸಜೀವ ದಹನಗೊಂಡಿದ್ದಾನೆ. ಅನಂತಪುರ ಜಿಲ್ಲೆಯ ಡಿ ಹಿರೇಹಾಳ ಮಂಡಲದಲ್ಲಿ ಈ ಒಂದು ಘಟನೆ ಸಂಭವಿಸಿದೆ.ಜಾಜರಕಲ್ ಟೋಲ್ ಪ್ಲಾಜಾ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಪಂಚರಾಗಿ ಟ್ಯಾಂಕರ್ ರಸ್ತೆ ಬದಿ ನಿಂತಿತ್ತು. ಈ ವೇಳೆ ರಾಂಪುರಂ ಕಡೆಯಿಂದ ಲಾರಿ ವೇಗವಾಗಿ ಬಂದಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಜೀವ ದಹನಗೊಂಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

