Breaking News

ಒಡಹುಟ್ಟಿದ ತಮ್ಮನನ್ನೇ ದೊಣ್ಣೆಯಿಂದ ಹೊಡೆದು ಕೊಂದ ಅಣ್ಣ!

ಆನಂದಪುರ: ಬ್ಯಾಂಕ್ ಸಾಲದ ನೋಟಿಸ್ ವಿಚಾರವಾಗಿ ಉಂಟಾದ ದ್ವೇಷದ ಹಿನ್ನೆಲೆಯಲ್ಲಿ ಅಣ್ಣನೇ ತಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಮಾದರಸನಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೇ 23ರಂದು ನಡೆದ ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರಾಘವೇಂದ್ರ (39) ಚಿಕಿತ್ಸೆ ಫಲಿಸದೆ ಜೂನ್ 9ರಂದು ಮೃತಪಟ್ಟಿದ್ದಾರೆ. ಅಣ್ಣ ಮಹೇಶ್ (49) ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರಕರಣ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *