ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 41 ವರ್ಷದ ಮಹಿಳೆಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ರಾಜ್ಯ ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಸಮಗ್ರ ತನಿಖೆಗೆ ಸೂಚಿಸಿದೆ. ಜೂನ್ 3ರಂದು ಸಹಾಯ ಮಾಡುವ ನೆಪದಲ್ಲಿ ಮಹಿಳೆಗೆ ತಂಪು ಪಾನೀಯ ನೀಡಿ ಪ್ರಜ್ಞೆ ತಪ್ಪಿಸಿ, ಸಮೀಪದ ಜಮೀನಿಗೆ ಕರೆದೊಯ್ದು ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಆರೋಪಿಗಳು ಘಟನೆಯ ವಿಡಿಯೋ ಹಾಗೂ ಫೋಟೋಗಳನ್ನು ಚಿತ್ರೀಕರಿಸಿ ಬಳಿಕ ಹರಿಬಿಟ್ಟಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ದೂರು ದಾಖಲಾದ ಬಳಿಕ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಒಬ್ಬ ಅಪ್ರಾಪ್ತ ಸೇರಿದಂತೆ 10 ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

