ಚಿಕ್ಕಮಗಳೂರು: ಜಮೀನಿನ ಸರ್ವೆ ಸ್ಕೆಚ್ ಮಾಡಿಕೊಡಲು ರೈತನಿಂದ ಲಂಚ ಪಡೆಯುತ್ತಿದ್ದ ಮಹಿಳಾ ಸರ್ವೇಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೂಡಿಗೆರೆ ಎಡಿಎಲ್ಆರ್ ಕಚೇರಿಯ ಸರ್ವೇಯರ್ ಸುಮಾ ಅವರು ರೈತ ಮಂಜುನಾಥ್ ಅವರಿಂದ ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಮೊದಲ ಕಂತಿನ ₹15 ಸಾವಿರ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು ಬಂಧಿಸಿದ್ದಾರೆ. ರೈತ ಮಂಜುನಾಥ್ ಲೋಕಾಯುಕ್ತರಿಗೆ ದೂರು ನೀಡಿದ ಹಿನ್ನೆಲೆ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ಬಲೆ ಬೀಸಲಾಗಿತ್ತು. ಕಚೇರಿಯಲ್ಲೇ ಲಂಚದ ಹಣ ಪಡೆಯುವಾಗ ಸುಮಾ ಅವರನ್ನು ರೆಡ್ಹ್ಯಾಂಡ್ ಆಗಿ ಹಿಡಿದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ವೇಳೆ ವಿಜಯಪುರ ಜಿಲ್ಲೆಯ ಸಾಲೋಟಗಿಯಲ್ಲಿ ಕಾಮಗಾರಿಯ ಬಿಲ್ ಬಿಡುಗಡೆ ಮಾಡಲು ₹18 ಸಾವಿರ ಲಂಚ ಪಡೆಯುತ್ತಿದ್ದ ಕೆಬಿಜೆಎನ್ಎಲ್ನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹಾಗೂ ಕಿರಿಯ ಅಭಿಯಂತರನನ್ನೂ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

