ಬೆಳ್ತಂಗಡಿ: ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಗ್ರಾಮೀಣ ಅಂಚೆ ವಿತರಕನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿ ಹಾಗೂ ಅರಸಿಮಕ್ಕಿ ಗ್ರಾಮೀಣ ಅಂಚೆ ವಿತರಕ ಸುರೇಶ್ (35) ಬಂಧಿತ ಆರೋಪಿ. 2023ರ ಡಿಸೆಂಬರ್‌ನಲ್ಲಿ ನಡೆದಿದ್ದ ಘಟನೆಗೆ ಸಂಬಂಧಿಸಿ ಸಂತ್ರಸ್ತೆ ಜೂನ್ 7ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದಲ್ಲಿ ತನಿಖೆ ನಡೆಸಿದ ಪೊಲೀಸರು ಜೂನ್ 8ರ ರಾತ್ರಿ ಆರೋಪಿಯನ್ನು ಕಳೆಂಜದಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಜೂನ್ 9ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಡಿವೈಎಸ್ಪಿ ರೋಹಿನಿ ಸಿ.ಕೆ. ಮಾರ್ಗದರ್ಶನದಲ್ಲಿ ಪೊಲೀಸ್ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

