ಚಿಂತಾಮಣಿ: ಮಿಂಚಲಹಳ್ಳಿ ಗ್ರಾಮದ ಸರ್ಕಾರಿ ಕೆರೆ ಅಂಗಳದಲ್ಲಿ ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದ 8 ಮಂದಿಯನ್ನು ಕೆಂಚಾರ್ಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ₹25,560 ನಗದು ಹಾಗೂ 52 ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಬ್ ಇನ್‌ಸ್ಪೆಕ್ಟರ್ ಶ್ಯಾಮಲ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿದೆ. ಈ ವೇಳೆ ಅಂದರ್-ಬಾಹರ್ ಆಡುತ್ತಿದ್ದವರು ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದರೂ, ಪೊಲೀಸರು ಸುತ್ತುವರಿದು ಬಂಧಿಸಿದ್ದಾರೆ. ಬಂಧಿತರು ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಗ್ರಾಮಗಳ ನಿವಾಸಿಗಳಾಗಿದ್ದು, ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

