Breaking News

ಬೆಂಗಳೂರು | ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ: ಆರೋಪಿ ಸೆರೆ

ಬೆಂಗಳೂರು: ಎಚ್‌ಬಿಆರ್ ಲೇಔಟ್‌ನ ಮನೆಯಲ್ಲಿ ಬಾಲ್ಕನಿಯ ಮೂಲಕ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯನ್ನು ಕೆ.ಜಿ ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಟ್ಯಾನರಿ ಮುಖ್ಯರಸ್ತೆ ನಿವಾಸಿ ಮುದಾಸೀರ್ (25) ಬಂಧಿತನಾಗಿದ್ದು, ಆತನಿಂದ 34 ಗ್ರಾಂ ಚಿನ್ನದ ಆಭರಣ ಹಾಗೂ 172 ಗ್ರಾಂ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೇ 29ರಂದು ಮನೆಯ ಎರಡನೇ ಮಹಡಿಯ ಬಾಲ್ಕನಿ ಬಾಗಿಲು ತೆರೆದಿದ್ದ ವೇಳೆ ಒಳನುಗ್ಗಿದ್ದ ಆರೋಪಿ, ಕಪಾಟಿನಲ್ಲಿದ್ದ ಆಭರಣಗಳನ್ನು ಕದ್ದೊಯ್ದಿದ್ದ. ಈ ಸಂಬಂಧ ಮನೆ ಮಾಲೀಕರು ಕೆ.ಜಿ ಹಳ್ಳಿ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೆ.ಜಿ ಹಳ್ಳಿ ರೈಲ್ವೆ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮುದಾಸೀರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಆರೋಪಿಯು ಕಳ್ಳತನ ಒಪ್ಪಿಕೊಂಡಿದ್ದು, ಆತ ಬಚ್ಚಿಟ್ಟಿದ್ದ ಆಭರಣಗಳನ್ನು ಜಪ್ತಿ ಮಾಡಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *